RDPR Karnataka Panchayat Raj Recruitment 2026: ₹1 ಲಕ್ಷ ಸಂಬಳದ ಉದ್ಯೋಗಾವಕಾಶ! ವಿಷಯ ಪರಿಣಿತರು ಹಾಗೂ ಯುವ ವೃತ್ತಿಪರರ ನೇಮಕಾತಿ
ಸರ್ಕಾರಿ ವಲಯದಲ್ಲಿ ಉತ್ತಮ ಸಂಭಾವನೆಯ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಸುವರ್ಣಾವಕಾಶ ಪ್ರಕಟವಾಗಿದೆ. ಸಾಮಾಜಿಕವಾಗಿ ಸ್ಪಂದಿಸುವ ಸ್ಥಳೀಯ ಆಡಳಿತ (Socially Responsive Local Governance – SRLG) ಕೋಶದಲ್ಲಿ ಖಾಲಿ ಇರುವ ವಿಷಯ ಪರಿಣಿತರು (Subject Expert) ಹಾಗೂ ಯುವ ವೃತ್ತಿಪರರು (Young Professionals) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿಗಳನ್ನು ಮತ್ತಷ್ಟು ಜನಸ್ನೇಹಿ, ಜವಾಬ್ದಾರಿಯುತ ಹಾಗೂ ಸಾಮಾಜಿಕವಾಗಿ ಸ್ಪಂದಿಸುವ ಆಡಳಿತ ವ್ಯವಸ್ಥೆಗಳನ್ನಾಗಿ ರೂಪಿಸುವ ಉದ್ದೇಶದಿಂದ ಈ ಕೋಶವನ್ನು ಸ್ಥಾಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒಬ್ಬ ವಿಷಯ ಪರಿಣಿತರು ಹಾಗೂ ಇಬ್ಬರು ಯುವ ವೃತ್ತಿಪರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ನೇಮಕಾತಿ ಪಕ್ಷಿನೋಟ:
| ನೇಮಕಾತಿ ಸಂಸ್ಥೆಯ ಹೆಸರು | ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ |
| ಹುದ್ದೆಗಳ ಸಂಖ್ಯೆ | 03 |
| ವಿದ್ಯಾರ್ಹತೆ | ಪದವಿ |
| ವೇತನ | Rs 75,000 – Rs.1,00,00/- |
| ಅರ್ಜಿ ವಿಧಾನ | offline |
| ಅರ್ಜಿ ಶುಲ್ಕ | ಇಲ್ಲ |
| ಕೊನೆಯ ದಿನಾಂಕ | 06.06.2026 |
- ಹುದ್ದೆಗಳ ವಿವರ: ನೇಮಕಾತಿ ಅಧಿಸೂಚನೆಯ ಪ್ರಕಾರ ಒಟ್ಟು 3 ಹುದ್ದೆಗಳು ಖಾಲಿ ಇದ್ದು, ಅವುಗಳ ವಿವರ ಕೆಳಗಿನಂತಿದೆ
| ಕ್ರ.ಸಂ | ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
| 1 | ವಿಷಯ ಪರಿಣಿತರು | 01 ಹುದ್ದೆ |
| 2 | ಯುವ ವೃತ್ತಿಪರರು | 02 ಹುದ್ದೆಗಳು |
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ರಾಜ್ಯದ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸಾಮಾಜಿಕ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಮೇಲ್ವಿಚಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
2. ವಿದ್ಯಾರ್ಹತೆ
- ವಿಷಯ ಪರಿಣಿತರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಮಾಜಶಾಸ್ತ್ರ, ಸಮಾಜ ಕಾರ್ಯ, ಗ್ರಾಮೀಣಾಭಿವೃದ್ಧಿ, ಸಾರ್ವಜನಿಕ ನೀತಿ ಅಥವಾ ಸಂಬಂಧಿತ ವಿಷಯಗಳಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಸಾಮಾಜಿಕ ಅಭಿವೃದ್ಧಿ ಕ್ಷೇತ್ರದಲ್ಲಿ 5 ರಿಂದ 8 ವರ್ಷಗಳ ಅನುಭವ ಹೊಂದಿರಬೇಕು.
- ಯುವ ವೃತ್ತಿಪರರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಮಾಜಶಾಸ್ತ್ರ, ಸಮಾಜ ಕಾರ್ಯ, ಗ್ರಾಮೀಣಾಭಿವೃದ್ಧಿ, ಸಾರ್ವಜನಿಕ ನೀತಿ ಅಥವಾ ಯಾವುದೇ ಮಾನ್ಯತೆ ಪಡೆದ ವಿಷಯದಲ್ಲಿ ಪದವಿ ಪಡೆದಿರಬೇಕು. ಆರೋಗ್ಯ, ಶಿಕ್ಷಣ, ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ, ವಿಶೇಷ ಚೇತನರು ಅಥವಾ ಹಿರಿಯ ನಾಗರಿಕರ ಕಲ್ಯಾಣ ಕ್ಷೇತ್ರಗಳಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
3. ವಯೋಮಿತಿ ಮತ್ತು ಅರ್ಹತೆಗಳು:
- ವಿಷಯ ಪರಿಣಿತರ ಹುದ್ದೆಗೆ ಕನಿಷ್ಠ 30 ವರ್ಷ ವಯಸ್ಸು ಕಡ್ಡಾಯವಾಗಿದೆ. ಯುವ ವೃತ್ತಿಪರರ ಹುದ್ದೆಗೆ ಗರಿಷ್ಠ 35 ವರ್ಷ ವಯಸ್ಸು ನಿಗದಿಪಡಿಸಲಾಗಿದೆ.
- ಅಭ್ಯರ್ಥಿಗಳು ಕನ್ನಡ ಭಾಷೆಯನ್ನು ಓದಲು, ಬರೆಯಲು ಹಾಗೂ ಮಾತನಾಡಲು ತಿಳಿದಿರಬೇಕು. ಇಂಗ್ಲಿಷ್ ಭಾಷೆಯ ಜ್ಞಾನವೂ ಅಗತ್ಯವಾಗಿದೆ. ಜೊತೆಗೆ MS Word, MS Excel ಮತ್ತು PowerPoint ಬಳಸುವ ಕಂಪ್ಯೂಟರ್ ಕೌಶಲ್ಯ ಹೊಂದಿರಬೇಕು.
- ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾದ ಯೋಜನೆಗಳ ಬಗ್ಗೆ ಮಾಹಿತಿ ಇರಬೇಕು
- ಸಾಮಾಜಿಕವಾಗಿ ಸ್ಪಂದಿಸುವ ಸ್ಥಳೀಯ ಆಡಳಿತ ಕೋಶ”ದ ಗುರಿಯನ್ನು ಸಾಧಿಸಲು ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಭಾಗೀದಾರರೊಂದಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿರಬೇಕು.
- ಕ್ಷೇತ್ರ ಮಟ್ಟದಲ್ಲಿ ಗ್ರಾಮ ಪಂಚಾಯತಿಗಳು ಮತ್ತು ಸಮುದಾಯದೊಂದಿಗೆ ಕೆಲಸ ಮಾಡಲು ಮತ್ತು ಅಗತ್ಯವಿದ್ದಲ್ಲಿ ಯಾವುದೇ ಗ್ರಾಮ ಪಂಚಾಯತಿಗೆ ಪ್ರಯಾಣಿಸಲು ಸಿದ್ಧರಿರಬೇಕು.
4. ಪ್ರಮುಖ ಜವಾಬ್ದಾರಿಗಳು
- ಹುದ್ದೆ: ವಿಷಯ ಪರಿಣಿತರು
- ಜವಾಬ್ದಾರಿಗಳು:
- ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಿಗೆ ವರದಿ ಸಲ್ಲಿಸುವುದರೊಂದಿಗೆ, ಸಾಮಾಜಿಕವಾಗಿ ಸ್ಪಂದಿಸುವ ಸ್ಥಳೀಯ ಆಡಳಿತ (Socially Responsive Local Governance – SRLG) ಚಟುವಟಿಕೆಗಳ ಸಮಗ್ರ ಸಮನ್ವಯ ಮತ್ತು ಅನುಷ್ಠಾನವನ್ನು ನಿರ್ವಹಿಸುವುದು.
- ಸಾಮಾಜಿಕವಾಗಿ ಸ್ಪಂದಿಸುವ ಸ್ಥಳೀಯ ಆಡಳಿತದ ಪರಿಕಲ್ಪನೆ, ಉದ್ದೇಶಗಳು ಹಾಗೂ ಗ್ರಾಮ ಪಂಚಾಯಿತಿಗಳಿಂದ ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸಿದ್ಧಪಡಿಸುವುದು.
- ಸಾಮಾಜಿಕವಾಗಿ ಸ್ಪಂದಿಸುವ ಸ್ಥಳೀಯ ಆಡಳಿತ ಕುರಿತಾಗಿ ವಿವಿಧ ಭಾಗೀದಾರರು ಮತ್ತು ಸಂಬಂಧಿತ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಹಾಗೂ ನಿರ್ವಹಿಸಲು ಬೆಂಬಲ ನೀಡುವುದು.
- ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ, ಮಹಿಳಾ ದೌರ್ಜನ್ಯ ಮುಕ್ತಿ ಅಭಿಯಾನ ಸೇರಿದಂತೆ ವಿವಿಧ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸುತ್ತೋಲೆಗಳು, ಮಾರ್ಗಸೂಚಿಗಳು ಹಾಗೂ ನಿರ್ದೇಶನಗಳನ್ನು ಸಿದ್ಧಪಡಿಸುವುದು.
- ಗ್ರಾಮ ಪಂಚಾಯಿತಿಗಳಿಂದ ಆಯೋಜಿಸಲಾದ ಮಕ್ಕಳ ಮತ್ತು ಮಹಿಳೆಯರ ಗ್ರಾಮ ಸಭೆಗಳ ಪ್ರಗತಿ ವರದಿಗಳನ್ನು ಸಂಗ್ರಹಿಸಿ ಆಯುಕ್ತಾಲಯ ಹಾಗೂ ಸರ್ಕಾರಕ್ಕೆ ಸಲ್ಲಿಸಲು ಅಗತ್ಯ ಸಮನ್ವಯ ಸಾಧಿಸುವುದು.
- ಮಕ್ಕಳು, ಮಹಿಳೆಯರು, ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಸಂಬಂಧಿಸಿದ ವಿಷಯಗಳಲ್ಲಿ ಗ್ರಾಮ ಪಂಚಾಯಿತಿಗಳ ಸಾಮರ್ಥ್ಯ ವೃದ್ಧಿಗಾಗಿ ANSSIRD&PR ಹಾಗೂ ಇತರೆ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ತರಬೇತಿಗಳನ್ನು ಆಯೋಜಿಸಲು ನೆರವು ನೀಡುವುದು.
- ಮಕ್ಕಳು, ಮಹಿಳೆಯರು ಹಾಗೂ ವಿಶೇಷ ಚೇತನರ ಕಲ್ಯಾಣಕ್ಕಾಗಿ ಗ್ರಾಮ ಪಂಚಾಯಿತಿಗಳು ಪ್ರತ್ಯೇಕ ಆಯವ್ಯಯ (Budget) ಸಿದ್ಧಪಡಿಸುವ ನಿಟ್ಟಿನಲ್ಲಿ ಅಗತ್ಯ ನಮೂನೆಗಳು, ತರಬೇತಿ ಮಾಡ್ಯೂಲ್‌ಗಳು ಹಾಗೂ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಅವುಗಳ ಅನುಷ್ಠಾನಕ್ಕೆ ಬೆಂಬಲ ಒದಗಿಸುವುದು.
- ಅರಿವು ಕೇಂದ್ರ, ಕೂಸಿನ ಮನೆ, ಘನ ತ್ಯಾಜ್ಯ ನಿರ್ವಹಣೆ ಹಾಗೂ ಗ್ರಾಮ ಆರೋಗ್ಯ ಯೋಜನೆಗಳ ಅನುಷ್ಠಾನ, ಮೇಲ್ವಿಚಾರಣೆ ಮತ್ತು ಮಾಹಿತಿ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ವಹಿಸುವುದು.
- ಗ್ರಾಮ ಪಂಚಾಯಿತಿಗಳನ್ನು ಸಾಮಾಜಿಕವಾಗಿ ಸ್ಪಂದಿಸುವ ಸ್ಥಳೀಯ ಆಡಳಿತ ಸಂಸ್ಥೆಗಳನ್ನಾಗಿ ರೂಪಿಸಲು ಸಮುದಾಯ ಸಂಸ್ಥೆಗಳು, ಸ್ವಯಂಸೇವಕರು ಹಾಗೂ ಇತರೆ ಭಾಗೀದಾರರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವುದು.
- ಆಯುಕ್ತಾಲಯದ ವತಿಯಿಂದ ಆಯೋಜಿಸಲಾದ ಪ್ರಗತಿ ಪರಿಶೀಲನಾ ಸಭೆಗಳು, ಕಾರ್ಯಾಗಾರಗಳು ಹಾಗೂ ಇತರೆ ಸಭೆಗಳ ನಿರ್ವಹಣೆಗೆ ಅಗತ್ಯ ಬೆಂಬಲ ಮತ್ತು ಸಮನ್ವಯ ಒದಗಿಸುವುದು.
- ಯುವ ವೃತ್ತಿಪರರಿಗೆ (Young Professionals) ಅವರ ಕರ್ತವ್ಯ ನಿರ್ವಹಣೆಯಲ್ಲಿ ಮಾರ್ಗದರ್ಶನ, ಸಲಹೆ ಹಾಗೂ ತಾಂತ್ರಿಕ ಬೆಂಬಲ ನೀಡುವುದರೊಂದಿಗೆ, ಅವರ ಕಾರ್ಯಕ್ಷಮತೆಯ ಮೇಲ್ವಿಚಾರಣೆ ವಹಿಸುವುದು.
- ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಹಾಗೂ ನಿರ್ದೇಶಕರು (ಅಭಿವೃದ್ಧಿ) ಕಾಲಕಾಲಕ್ಕೆ ವಹಿಸುವ ಇತರೆ ಜವಾಬ್ದಾರಿಗಳು ಮತ್ತು ಕಾರ್ಯಗಳನ್ನು ನಿರ್ವಹಿಸುವುದು.
ಹುದ್ದೆ: ಯುವ ವೃತ್ತಿಪರರು
ಜವಾಬ್ದಾರಿಗಳು:
- ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಿಗೆ ವರದಿ ಸಲ್ಲಿಸುವುದರೊಂದಿಗೆ, ಕೋಶದ ದೈನಂದಿನ ಕಾರ್ಯಚಟುವಟಿಕೆಗಳ ಪರಿಣಾಮಕಾರಿ ನಿರ್ವಹಣೆಗೆ ಅಗತ್ಯವಾದ ಸಂಪೂರ್ಣ ಬೆಂಬಲ ಮತ್ತು ಸಹಕಾರ ಒದಗಿಸುವುದು.
- ಮಕ್ಕಳ ಗ್ರಾಮ ಸಭೆ, ಮಹಿಳೆಯರ ಗ್ರಾಮ ಸಭೆ ಹಾಗೂ ಮಹಿಳಾ ದೌರ್ಜನ್ಯ ಮುಕ್ತಿ ಅಭಿಯಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿದ ಸುತ್ತೋಲೆಗಳು, ಮಾರ್ಗಸೂಚಿಗಳು ಮತ್ತು ನಿರ್ದೇಶನಗಳು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಮೂಲಕ ಗ್ರಾಮ ಪಂಚಾಯಿತಿಗಳಿಗೆ ತಲುಪುವಂತೆ ಹಾಗೂ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಖಾತರಿಪಡಿಸುವುದು.
- ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ, ಮಕ್ಕಳ ಗ್ರಾಮ ಸಭೆ, ಮಹಿಳೆಯರ ಗ್ರಾಮ ಸಭೆ ಹಾಗೂ ಇತರೆ ಅಗತ್ಯ ವರದಿಗಳನ್ನು ಗ್ರಾಮ ಪಂಚಾಯಿತಿಗಳು P-2 ಪೋರ್ಟಲ್‌ನಲ್ಲಿ ಸಮಯೋಚಿತವಾಗಿ ದಾಖಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.
- ಅರಿವು ಕೇಂದ್ರ, ಕೂಸಿನ ಮನೆ, ಘನ ತ್ಯಾಜ್ಯ ನಿರ್ವಹಣೆ ಮತ್ತು ಗ್ರಾಮ ಆರೋಗ್ಯ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಗತಿ ವರದಿಗಳನ್ನು ಗ್ರಾಮ ಪಂಚಾಯಿತಿಗಳು P-2 ಪೋರ್ಟಲ್‌ನಲ್ಲಿ ದಾಖಲಿಸಿರುವುದನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಖಚಿತಪಡಿಸಿಕೊಳ್ಳುವುದು.
- ಮಕ್ಕಳು, ಮಹಿಳೆಯರು ಹಾಗೂ ವಿಶೇಷ ಚೇತನರ ಕಲ್ಯಾಣಕ್ಕಾಗಿ ಗ್ರಾಮ ಪಂಚಾಯಿತಿಗಳು ಆಯವ್ಯಯ (Budget) ಸಿದ್ಧಪಡಿಸಲು ಅಗತ್ಯವಾದ ನಮೂನೆಗಳು, ತರಬೇತಿ ಮಾಡ್ಯೂಲ್‌ಗಳು ಹಾಗೂ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಲು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಬೆಂಬಲ ಒದಗಿಸುವುದು.
- ಗ್ರಾಮ ಪಂಚಾಯಿತಿಗಳಿಂದ ಮಕ್ಕಳು, ಮಹಿಳೆಯರು ಮತ್ತು ವಿಶೇಷ ಚೇತನರ ಅಭಿವೃದ್ಧಿಗಾಗಿ ಸಿದ್ಧಪಡಿಸಲಾದ ಆಯವ್ಯಯದ ಅನುಷ್ಠಾನಕ್ಕೆ ಅಗತ್ಯ ತಾಂತ್ರಿಕ ಮತ್ತು ಆಡಳಿತಾತ್ಮಕ ಬೆಂಬಲ ಒದಗಿಸುವುದು.
- ಗ್ರಾಮ ಪಂಚಾಯಿತಿಗಳಿಂದ ಕಾಲಕಾಲಕ್ಕೆ ಅನುಷ್ಠಾನಗೊಳ್ಳುವ ವಿವಿಧ ಕಾರ್ಯಕ್ರಮಗಳ ಪ್ರಗತಿ ವರದಿಗಳನ್ನು ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳಿಂದ ಸಂಗ್ರಹಿಸಿ, ಅವುಗಳನ್ನು ಕ್ರೋಡೀಕರಿಸಿ ಆಯುಕ್ತರು ಹಾಗೂ ನಿರ್ದೇಶಕರು (ಅಭಿವೃದ್ಧಿ) ಅವರಿಗೆ ಸಲ್ಲಿಸುವುದು.
- ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು, ನಿರ್ದೇಶಕರು (ಅಭಿವೃದ್ಧಿ) ಹಾಗೂ ವಿಷಯ ಪರಿಣಿತರು ಕಾಲಕಾಲಕ್ಕೆ ವಹಿಸುವ ಇತರೆ ಜವಾಬ್ದಾರಿಗಳು ಮತ್ತು ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವುದು.
5. ಸಂಭಾವನೆ ಎಷ್ಟು?
ಈ ನೇಮಕಾತಿಯ ಪ್ರಮುಖ ಆಕರ್ಷಣೆಯೆಂದರೆ ಉತ್ತಮ ಸಂಭಾವನೆ.
- ವಿಷಯ ಪರಿಣಿತರು: ತಿಂಗಳಿಗೆ ₹1,00,000
- ಯುವ ವೃತ್ತಿಪರರು: ತಿಂಗಳಿಗೆ ₹75,000
ಸಾಮಾಜಿಕ ಅಭಿವೃದ್ಧಿ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.
5. ಆಯ್ಕೆ ವಿಧಾನ
ಅಭ್ಯರ್ಥಿಗಳ ವಿದ್ಯಾರ್ಹತೆ, ಅನುಭವ ಹಾಗೂ ಕೌಶಲ್ಯಗಳನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಆಯ್ಕೆಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮತ್ತು ಮೌಖಿಕ ಸಂದರ್ಶನ ನಡೆಸಲಾಗುತ್ತದೆ. ಅರ್ಜಿ ಸಲ್ಲಿಸುವಾಗ ವಿದ್ಯಾರ್ಹತೆಯ ಅಂಕಪಟ್ಟಿಗಳು, ಅನುಭವ ಪ್ರಮಾಣಪತ್ರಗಳು, ವಯೋಮಿತಿ ದೃಢೀಕರಣ ದಾಖಲೆಗಳು ಹಾಗೂ ಇತರೆ ಸಾಧನೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಬೇಕು.
6. ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಅರ್ಜಿಯನ್ನು ಸಿದ್ಧಪಡಿಸಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು. ಅರ್ಜಿಗಳನ್ನು ಖುದ್ದಾಗಿ ಅಥವಾ ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ.
ಇ-ಮೇಲ್ ವಿಳಾಸ: srigrecruitment@gmail.com
7. ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭ: 30 ಮೇ 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ಜೂನ್ 2026
- ಕೊನೆಯ ಸಮಯ: ಸಂಜೆ 5.30
ನಿಗದಿತ ಅವಧಿಯ ನಂತರ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಕೊನೆಯ ಮಾತು
ಸರ್ಕಾರದೊಂದಿಗೆ ಕಾರ್ಯನಿರ್ವಹಿಸುವ ಆಸಕ್ತಿ ಹೊಂದಿರುವ ಹಾಗೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಈ ನೇಮಕಾತಿ ಉತ್ತಮ ಅವಕಾಶವಾಗಿದೆ. ಉತ್ತಮ ಸಂಭಾವನೆ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಅವಕಾಶ ಹಾಗೂ ಗ್ರಾಮೀಣಾಭಿವೃದ್ಧಿಗೆ ಕೊಡುಗೆ ನೀಡುವ ಅವಕಾಶ ಈ ಹುದ್ದೆಗಳ ವಿಶೇಷತೆಯಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಪ್ರಮುಖ ಲಿಂಕುಗಳು
| ವಿವರಗಳು | ಲಿಂಕ್‌ಗಳು |
| ಅಧಿಕೃತವೆಬ್ ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
| ವಾಟ್ಸ್ ಆಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
2 thoughts on “RDPR Karnataka Panchayat Raj Recruitment 2026: ₹1 ಲಕ್ಷ ಸಂಬಳದ ಉದ್ಯೋಗಾವಕಾಶ! ವಿಷಯ ಪರಿಣಿತರು ಹಾಗೂ ಯುವ ವೃತ್ತಿಪರರ ನೇಮಕಾತಿ”